ದಾವಣಗೆರೆ: ರಾಜ್ಯದಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳ ಶುಲ್ಕ ಜಾಸ್ತಿಯಾಗಿದೆ. ಕಡಿಮೆಗೊಳಿಸುವ ಸಂಬಂಧ ಈಗಾಗಲೇ ಚರ್ಚೆ ನಡೆಸಲಾಗಿದೆ. ಈ ಸಂಬಂಧ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೆಡಿಕಲ್ ಕಾಲೇಜುಗಳ ಶುಲ್ಕ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ. ಸರ್ಕಾರಿ ಮೆಡಿಕಲ್ ಕಾಲೇಜು ಸೀಟುಗಳು ಕಡಿಮೆ ಇವೆ. ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಶುಲ್ಕ ಹೆಚ್ಚಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಮ್ಯಾನೇಜ್ ಮೆಂಟ್ ಹಾಗೂ ಎನ್ ಆರ್ ಐ ಖೋಟಾದಡಿ ಸೀಟು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶುಲ್ಕ ಜಾಸ್ತಿಯಾಗಿ ಬೇಡಿಕೆ ಹೆಚ್ಚಿದೆ ಎಂದರು.
ಶೇಕಡಾ 95ರಷ್ಟು ಅಂಕ ಪಡೆದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿಲ್ಲ. ಭಾರತೀಯ ವೈದ್ಯಕೀಯ ಮಂಡಳಿ ಜೊತೆ ಸಮಾಲೊಚನೆ ನಡೆಸಿ, ಶುಲ್ಕ ಕಡಿಮೆಗೊಳಿಸುವ ಸಂಬಂಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
PublicNext
21/03/2022 12:51 pm