ಬೆಂಗಳೂರು : ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿಕರವಿಲ್ಲ, ಬದಲಿಗೆ ಅನೇಕ ಬಗೆಯಲ್ಲಿ ಲಾಭವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಅಡಿಕೆಯನ್ನು ನಿಷೇಧಿಸಬೇಕು ಎಂದು ಲೋಕಸಭಾ ಸದಸ್ಯರೊಬ್ಬರು ಹೇಳಿಕೆ ನೀಡಿದ್ದರು. ಇದರಿಂದ ಅಡಿಕೆ ಬೆಳೆಯುವ ರೈತರು ಆತಂಕಕ್ಕೆ ಒಳಗಾಗಿದ್ದರು. ಆದರೆ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬ ಬಗ್ಗೆ, ಸಂಶೋಧನೆಗಳು ನಡೆಯುತ್ತಿವೆ. ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಲು ರಾಜ್ಯದ ಅಡಿಕೆ ಕಾರ್ಯಪಡೆ ನಿಯೋಗದ ವತಿಯಿಂದ ದೆಹಲಿಗೆ ತೆರಳಿ ಸಚಿವರನ್ನು ಭೇಟಿ ಮಾಡಲಾಗಿತ್ತು ಎಂದು ಹೇಳಿದರು.
PublicNext
22/03/2022 12:26 pm