ಮೈಸೂರು : ಇಡೀ ಜಗತ್ತಿನ ಗಮನ ಸೆಳೆದಿರುವ ಭಾರತೀಯ ಉತ್ಕೃಷ್ಟ ಸಂಸ್ಕೃತಿಯ ಪ್ರತೀಕವಾದ ಯೋಗ ದಿನಾಚರಣೆಯ ಅಂಗವಾಗಿ ಇಂದು ಮೈಸೂರಿನಲ್ಲಿ ನಡೆದ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.
ಮೋದಿಯವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಆಯುಷ್ ಸಚಿವ ಸರಬಾನಂದ ಸೋನೋವಾಲ್, ರಾಜಮಾತೆ ಪ್ರಮೋದಾದೇವಿ ಒಡೆಯರ್, ಯುವರಾಜ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಸಚಿವರಾದ ಎಸ್ ಟಿ ಸೋಮಶೇಖರ್, ಡಾ. ಕೆ. ಸುಧಾಕರ ಭಾಗವಹಿಸಿದ್ದರು. ಸುಮಾರು 15 ಸಾವಿರ ಯೋಗ ಪಟುಗಳು ಕಾರ್ಯಕ್ರಮದಲ್ಲಿದ್ದರು.
PublicNext
21/06/2022 09:36 am