ಮೈಸೂರು: 8 ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಇಂದು ಪ್ರಧಾನಿ ಮೋದಿ ಅರಮನೆ ಮುಂಭಾಗದಲ್ಲಿ ಯೋಗಾಸನ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು.ಸುಮಾರು 15 ಸಾವಿರ ಯೋಗಪಟುಗಳೊಂದಿಗೆ ಬರೊಬ್ಬರಿ 45 ನಿಮಿಷ ಯೋಗ ಮಾಡಿದ ಪ್ರಧಾನಿಗಳೊಂದಿಗೆ ಸಿಎಂ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ ಸೇರಿದಂತೆ ಅನೇಕರು ಗಣ್ಯರು ಭಾಗವಹಿಸಿದ್ದರು.
ಮೊದಲ ಒಂದು ನಿಮಿಷ ಪ್ರಾರ್ಥನೆ, 4 ನಿಮಿಷ ಚಲನಕ್ರಿಯೆ, 25 ನಿಮಿಷ ತಾಡಾಸನ, ವೃಕ್ಷಾಸನ, ಪಾದಹಸ್ತಾಸನ-1, ಪಾದಹಸ್ತಾಸನ-2, ಅರ್ಧಚಕ್ರಾಸನ, ತ್ರಿಕೋನಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಅರ್ಧಉಷ್ಟ್ರಾಸನ, ಉಷ್ಟ್ರಾಸನ, ಶಶಂಕಾಸನ, ಉತ್ಥಾನ ಮಂಡೂಕಾಸನ, ವಕ್ರಾಸನ, ಮಕರಾಸನ, ಸರಳ ಭುಜಂಗಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಪವನಮುಕ್ತಾಸನ, ಶವಾಸನ ಪ್ರದರ್ಶನ ನಡೆಯಲಿವೆ. ಬಳಿಕ 14 ನಿಮಿಷ ಪ್ರಾಣಾಯಾಮ, ಧ್ಯಾನ, ಸಂಕಲ್ಪ. ಒಂದು ನಿಮಿಷ ಶಾಂತಿಮಂತ್ರ, ಎರಡು ನಿಮಿಷ ಸಂಕಲ್ಪ. ಹೀಗೆ ಒಟ್ಟು 19 ಆಸನಗಳ ಪ್ರದರ್ಶನ ನಡೆಯಿತು.
PublicNext
21/06/2022 10:26 am