ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

‘ನೋ ಹಾಸ್ಪಿಟಲ್ ನೋ ವೋಟು’ : ಬೇಡಿಕೆಗೆ ಸ್ಪಂದಿಸಿದ ಸಚಿವ ಸುಧಾಕರ

ಕಾರವಾರ: ‘ನೋ ಹಾಸ್ಪಿಟಲ್ ನೋ ವೋಟು’ ಅಭಿಯಾನ ಸಚಿವರ ಗಮನ ಸೆಳೆದಿದೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕನ್ನಡದ ಜನರಿಂದ ಆರಂಭವಾದ ನೋ ಹಾಸ್ಪಿಟಲ್ ನೋ ವೋಟು’ ಅಭಿಯಾನಕ್ಕೆ ಆರೋಗ್ಯ ಸಚಿವ ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ.

ಈ ಕುರಿತು ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತು ಸಿಎಂ ಜೊತೆ ಚರ್ಚಿಸೋದಾಗಿ ಭರವಸೆ ಕೊಟ್ಟಿದ್ದಾರೆ.

Edited By : Nirmala Aralikatti
PublicNext

PublicNext

25/07/2022 11:51 am

Cinque Terre

40.18 K

Cinque Terre

0

ಸಂಬಂಧಿತ ಸುದ್ದಿ