ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಡಿಯೋ: ಗಲೀಜಾದ ಹಾಸಿಗೆಯಲ್ಲಿ ಮಲಗುವಂತೆ ಒತ್ತಾಯಿಸಿದ ಸಚಿವ.!

ಚಂಡೀಗಡ: ಪಂಜಾಬ್‌ ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರು ವೈದ್ಯ ಹಾಗೂ ಬಾಬಾ ಫರೀದ್ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿಯನ್ನು ಆಸ್ಪತ್ರೆಯ ಕೊಳಕಾದ ಹಾಸಿಗೆಯ ಮೇಲೆ ಮಲಗುವಂತೆ ಒತ್ತಾಯಿಸಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಚಿವರ ನಡೆಯ ಬಗ್ಗೆ ಭಾರಿ ಟೀಕೆ ವ್ಯಕ್ತವಾಗಿದೆ.

ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ ವಾರ್ಡ್‍ಗಳಲ್ಲಿ ಶುಚಿತ್ವದ ಬಗ್ಗೆ ದೂರುಗಳು ಬಂದ ನಂತರ, ಚೇತನ್ ಸಿಂಗ್ ಜೌರಮಜ್ರಾ ಅವರು ಮಾಧ್ಯಮಗಳು ಮತ್ತು ಕ್ಯಾಮೆರಾಮೆನ್‍ಗಳೊಂದಿಗೆ ಸರ್ಕಾರಿ ಆಸ್ಪತ್ರೆಗೆ ಪ್ರವೇಶಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರು ರಾಜ್ ಬಹದ್ದೂರ್ ಅವರಿಗೆ ರೋಗಿಯೊಬ್ಬರ ಗಲೀಜಾದ ಹಾಸಿಗೆಯ ಮೇಲೆ ಮಲಗಲು ಹೇಳಿದ್ದಾರೆ. ಈ ಹಿನ್ನೆಲೆ ಸಾರ್ವಜನಿಕವಾಗಿ ನನಗೆ ಅವಮಾನವಾಗಿದೆ ಎಂದು ರಾಜ್ ಬಹದ್ದೂರ್ ರಾಜೀನಾಮೆ ನೀಡಿದ್ದಾರೆ.

Edited By : Vijay Kumar
PublicNext

PublicNext

30/07/2022 10:42 pm

Cinque Terre

92.16 K

Cinque Terre

5

ಸಂಬಂಧಿತ ಸುದ್ದಿ