ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಬೊಮ್ಮಾಯಿಗೆ ಕೋವಿಡ್ ದೃಢ : ದೆಹಲಿ ಪ್ರವಾಸ ರದ್ದು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ ಸಿಎಂ ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.

ಇಂದು ದೆಹಲಿಯಲ್ಲಿ 75ನೇ ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವ ಕುರಿತು ಸಭೆಯಿತ್ತು. ಈ ಸಭೆಗೆ ಮುಖ್ಯಮಂತ್ರಿಗಳು ಹಾಜರಾಗಬೇಕಿತ್ತು. ಆದರೆ ಹಠಾತ್ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸವನ್ನ ರದ್ದುಗೊಳಿಸಿದ್ದಾರೆ.

Edited By : Nirmala Aralikatti
PublicNext

PublicNext

06/08/2022 10:11 am

Cinque Terre

46 K

Cinque Terre

10

ಸಂಬಂಧಿತ ಸುದ್ದಿ