ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂಗಡಿಗೆ ಸಿಎಂ ಪಟ್ಟ ನೀಡಲು ಹೈಕಮಾಂಡ್ ಪ್ಲ್ಯಾನ್ : ದಿ. ಸುರೇಶ್ ಅಂಗಡಿ ಸೋದರ ಮಾವ ಸಿಡಿಸಿದ್ರು ಹೊಸ ಬಾಂಬ್

ಬೆಳಗಾವಿ: ಸುರೇಶ ಅಂಗಡಿ ಅವರನ್ನು ಸಿಎಂ ಮಾಡಲು ನಾಲ್ಕು ತಿಂಗಳ ಹಿಂದೆಯಷ್ಟೇ ದೆಹಲಿಯಲ್ಲಿ ಸಭೆ ನಡೆದಿತ್ತು ಎಂದು ಅಂಗಡಿಯವರ ಸೋದರ ಮಾವ ಲಿಂಗರಾಜ್ ಪಾಟೀಲ ಸ್ಫೋಟಕ ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ, ಸ್ಥಳೀಯ ಸಂಸದ ಸುರೇಶ್ ಅಂಗಡಿ ಅಕಾಲಿಕ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದೇ ವೇಳೆ, ದಿ. ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಅವರು ರಾಜ್ಯ ರಾಜಕೀಯದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ.

ಕರ್ನಾಟಕ ಉಸ್ತುವಾರಿ ಮುರಳೀಧರ್ ರಾವ್ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.

ದೆಹಲಿಯ ಪ್ರಮುಖ ನಾಯಕರು ಅಂದು ಆ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಿದ್ದಾರೆ.

ಆ ಸಭೆಯಲ್ಲಿ ನಾನೂ ಸಹ ಭಾಗಿಯಾಗಿದ್ದೆ. ಮುರಳೀಧರ್ ರಾವ್ ಅವರಿಗೆ ಸುರೇಶ್ ಅಂಗಡಿ ನನ್ನಾ ಪರಿಚಯ ಮಾಡಿಸಿದ್ದರು.

ದುರಾದೃಷ್ಟವಶಾತ್ ಅಂಗಡಿ ವಿಧಿವಶರಾದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸುರೇಶ್ ಅಂಗಡಿ ಕುಟುಂಬಸ್ಥರಿಗೇ ಟಿಕೆಟ್ ನೀಡುವಂತೆ ಲಿಂಗರಾಜ್ ಪಾಟೀಲ್ ಮನವಿ ಮಾಡಿದ್ದಾರೆ.

ಅಂಗಡಿ ಪತ್ನಿ ಮಂಗಲಾ, ಮಕ್ಕಳಾದ ಸ್ಪೂರ್ತಿ, ಶ್ರದ್ಧಾ ಇದ್ರಲ್ಲಿ ಯಾರಿಗಾದರೂ ಟಿಕೆಟ್ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

29/09/2020 01:11 pm

Cinque Terre

78.91 K

Cinque Terre

2

ಸಂಬಂಧಿತ ಸುದ್ದಿ