ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೊನಾ ಲಾಕ್‌ಡೌನ್ ವೇಳೆ ಫುಡ್ ಕಿಟ್ ವಿತರಣೆಯಲ್ಲಿ ಅವ್ಯವಹಾರದ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಮಾಜಿ ಸಚಿವರ ಆರ್ಭಟಕ್ಕೆ ಸದನ ಗಪ್‌ಚುಪ್ ಆಗಿತ್ತು.
ಡಿ.ಕೆ.ಶಿವಕುಮಾರ್ ಅವರು ಸದನದಲ್ಲಿ ಮಾಸ್ಕ್ ಹಾಕಿಕೊಳ್ಳದೇ ಭಾಷಣ ಮಾಡುತ್ತಿದ್ದರು. ಈ ವೇಳೆ ಅವರನ್ನು ತಡೆದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಸ್ಕ್ ಹಾಕಿಕೊಳ್ಳುವಂತೆ ಸೂಚಿಸಿದರು. ಆದರೆ ಡಿ.ಕೆ.ಶಿವಕುಮಾರ್ ಅವರ ಬಳಿ ಮಾಸ್ಕ್ ಇಲ್ಲದೆ ಇರುವುದನ್ನು ಗಮನಿಸಿದ ಸ್ಪೀಕರ್ ಅವರು ಮಾರ್ಷಲ್‌ಗಳಿಂದ ಮಾಸ್ಕ್ ತರಿಸಿ ನೀಡಿದರು. ಆ ಬಳಿಕ ನಂತರ ಮಾಸ್ಕ್ ಧರಿಸಿದ ಡಿಕೆಶಿ ಮಾತು ಮುಂದುವರಿಸಿದರು.
PublicNext
22/09/2020 07:44 pm