ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಬಂಗಾಳಿ ಗಾಯಕಿ ಸಂಧ್ಯಾ ಮುಖರ್ಜಿ

ನವದೆಹಲಿ: ಕೇಂದ್ರ ಸರ್ಕಾರ ಘೋಷಿಸಿರುವ ಪದ್ಮಶ್ರೀ ಪ್ರಶಸ್ತಿಯನ್ನು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಮ್ಯುನಿಸ್ಟ್ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ ನಿರಾಕರಿಸಿದ್ದರು. ಇದರ ಬೆನ್ನಲ್ಲೇ ಇನ್ನೊಬ್ಬರು ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದಾರೆ. ಸುಮಾರು 8 ದಶಕಗಳ ಕಾಲ ಗಾಯನ ವೃತ್ತಿ ನಡೆಸಿದ 90 ವರ್ಷದ ಸಂಧ್ಯಾ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

ತಮಗೆ ಪದ್ಮಶ್ರೀಯ ಅಗತ್ಯವಿಲ್ಲ ಎಂದು ಹೇಳಿರುವ ಅವರು, “ಪ್ರಶಸ್ತಿಯು ತನಗಿಂತಲೂ ಕಿರಿಯ ಕಲಾವಿದರಿಗೆ ನೀಡುವುದು ಹೆಚ್ಚು ಸೂಕ್ತವಾಗಿದೆ” ಎಂದು ಸಂಧ್ಯಾ ಮುಖ್ಯೋಪಾಧ್ಯಾಯ ಎಂದೂ ಕರೆಯಲ್ಪಡುವ ಬಂಗಾಳಿ ಗಾಯಕಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೆಹಲಿಯಿಂದ ಕರೆ ಮಾಡಿದ ಹಿರಿಯ ಅಧಿಕಾರಿಗೆ, ತನ್ನ ತಾಯಿ ಪದ್ಮಶ್ರೀ ಪುರಸ್ಕೃತೆ ಎಂದು ಕರೆಯಿಸಿಕೊಳ್ಳೋದನ್ನುಇಚ್ಛಿಸುವುದಿಲ್ಲ ಎಂದು ಹೇಳಿದ್ದಾಗಿ ಅವರ ಪುತ್ರಿ ಸೌಮಿ ಸೆಂಗುಪ್ತಾ ಹೇಳಿದ್ದಾರೆ. ಅವರಿಗೆ ಇಳಿ ವಯಸ್ಸಿನಲ್ಲಿ ಪ್ರಶಸ್ತಿ ನೀಡುವುದು ಅವಮಾನವಾಗಿದೆ ಎಂದು ಅವರು ತಿಳಿಸಿದ್ದಾರೆ. ಗಣರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿಯಲ್ಲಿ ಪದ್ಮಶ್ರೀ ಎಂದು ಹೆಸರಿಸಲು ಒಪ್ಪಿಗೆ ಕೋರಿ ಅಧಿಕಾರಿಗಳು ಅವರನ್ನು ಸಂಪರ್ಕಿಸಿದ್ದರು.

Edited By : Nagaraj Tulugeri
PublicNext

PublicNext

26/01/2022 05:32 pm

Cinque Terre

123.33 K

Cinque Terre

20

ಸಂಬಂಧಿತ ಸುದ್ದಿ