ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

JDS ಶಾಸಕ ಎಂ.ಸಿ. ಮನಗೂಳಿ ನಿಧನ : ದೊಡ್ಡಗೌಡರಿಂದ ಸಂತಾಪ

ಬೆಂಗಳೂರು : ವಿಜಯಪುರ ಜಿಲ್ಲೆ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ (85) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಶಾಸಕರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ರಾಜಕೀಯ ಮತ್ತು ವೈಯಕ್ತಿಕವಾಗಿ ನನ್ನ ಹಲವು ದಶಕಗಳ ಒಡನಾಡಿಯಾಗಿದ್ದ ಮಾಜಿ ಸಚಿವ, ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಶ್ರೀ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಭಗವಂತ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

28/01/2021 07:34 am

Cinque Terre

117.33 K

Cinque Terre

11

ಸಂಬಂಧಿತ ಸುದ್ದಿ