ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ರಾಜ್ಯಪಾಲ ನ್ಯಾ| ರಾಮಾಜೋಯಿಸ್ ನಿಧನ

ಬೆಂಗಳೂರು : ನಿವೃತ್ತ ಹೈಕೋರ್ಟ್ ಮುಖ್ಯನ್ಯಾಯಮುರ್ತಿ ಹಾಗೂ ಮಾಜಿ ಬಿಹಾರ, ಛತ್ತೀಸ್ ‌ಗಢದಲ್ಲಿ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದ ರಾಮಾಜೋಯಿಸ್ (89) ಹೃದಯಾಘಾತದಿಂದ ಇಂದು ಮಂಗಳವಾರ ಬೆಳಗ್ಗೆ 7.30ರ ಸುಮಾರಿಗೆ ನಿಧನರಾದರು. ಪತ್ನಿ, ಇಬ್ಬರು ಮಕ್ಕಳು ಮತ್ತು ಮೂವರು ಮೊಮ್ಮಕ್ಕಳನ್ನ ಅವರು ಅಗಲಿದ್ದಾರೆ.

ಅವರ ಪಾರ್ಥಿವ ಶರೀರವನ್ನು ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ರಾಮಾಜೋಯಿಸ್ ಅವರ ಅಂತ್ಯಕ್ರಿಯೆ ಇಂದು ಸಂಜೆ 4ಕ್ಕೆ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

1931, ಜುಲೈ 27ರಂದು ಶಿವಮೊಗ್ಗದ ಅರಗ ಗ್ರಾಮದಲ್ಲಿ ಜನಿಸಿದ ರಾಮಾ ಜೋಯಿಸ್ ಕಾನೂನು ಪದವೀಧರರಾಗಿದ್ದರು. ಕಾನೂನು ಮತ್ತು ಸಂವಿಧಾನಕ್ಕೆ ಸಂಬಂಧಿಸಿದ ಅನೇಕ ಪುಸ್ತಕಗಳನ್ನ ಅವರು ರಚಿಸಿದ್ದಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿದ್ದರು. ಪಂಜಾಬ್ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

1975ರಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದ್ದ ಅವರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ರಾಜ್ಯಸಭಾ ಸದಸ್ಯರಾಗಿದ್ದ ಅವರು ಜಾರ್ಖಂಡ್ ಮತ್ತು ಬಿಹಾರ ರಾಜ್ಯಪಾಲರಾಗಿಯೂ ಕರ್ತವ್ಯ ನಿಭಾಯಿಸಿದ್ದರು.

Edited By : Nirmala Aralikatti
PublicNext

PublicNext

16/02/2021 09:51 am

Cinque Terre

90.37 K

Cinque Terre

11

ಸಂಬಂಧಿತ ಸುದ್ದಿ