ಚೆನ್ನೈ : ಎಐಎಡಿಎಂಕೆ ಸಂಯೋಜಕಿ ಮತ್ತು ತಮಿಳುನಾಡಿನ ಮಾಜಿ ಉಪ ಮುಖ್ಯಮಂತ್ರಿ ಪನ್ನೀರಸೆಲ್ವಂ ಅವರ ಪತ್ನಿ ವಿಜಯಲಕ್ಷ್ಮಿ (66) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಲಕ್ಷ್ಮೀ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು (ಬುಧವಾರ ಬೆಳಗ್ಗೆ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತಿ, ಮೂವರು ಮಕ್ಕಳನ್ನು ಅಗಲಿದ್ದಾರೆ.
ಕಳೆದ 10 ದಿನದ ಹಿಂದೆ ಚೆನ್ನೈ ಜೆಮ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಗುಣಮುಖರಾಗುತ್ತಿದ್ದರು. ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಬೆಳಗಿನ ಜಾವ 5ಕ್ಕೆ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದರು’ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
PublicNext
01/09/2021 01:49 pm