ಧಾರವಾಡ : ಪ್ರಖ್ಯಾತ ಸಂಗೀತಗಾರರು, ಡಾ.ಮಲ್ಲಿಕಾರ್ಜುನ ಮನಸೂರ ಅವರ ಪುತ್ರ ಹಾಗೂ ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ಸದಸ್ಯರು ಆದ ಧಾರವಾಡದ ಮನಸೂರ ಗ್ರಾಮದ ಪಂ. ರಾಜಶೇಖರ ಮನಸೂರ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಮೃತರ ಸುದ್ದಿ ತಿಳಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಂ.ರಾಜಶೇಖರ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
PublicNext
01/05/2022 10:31 pm