ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೋದಿ ಬರ್ಥ್ ಡೇ : ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರಿಗೆ 72ನೇ ಬರ್ಥ್ ಡೇ ಸಂಭ್ರಮ. ರಾಜಕೀಯ ಮುಖಂಡರು ಪ್ರಧಾನಿಗಳಿಗೆ ಶುಭಾಶಯ ತಿಳಿಸುವ ಮೂಲಕ ಈ ದಿನವನ್ನು ಇನ್ನಷ್ಟು ಸುಂದರವಾಗಿಸಿದ್ದಾರೆ. ಹೌದು ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟ್ ಮೂಲಕ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಭ ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇಶದ ಅತ್ಯಂತ ಪ್ರೀತಿಯ ನಾಯಕ ಮತ್ತು ನಮ್ಮೆಲ್ಲರ ಸ್ಫೂರ್ತಿಯಾಗಿರುವ ಮೋದಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೇವರಿಂದ ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ PM ಮೋದಿಯವರಿಗೆ ಜನ್ಮ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಅವರು ತಮ್ಮ ನೇತೃತ್ವದಲ್ಲಿ ದೇಶದ ಪ್ರಗತಿ ಮತ್ತು ಉತ್ತಮ ಆಡಳಿತಕ್ಕೆ ಅಭೂತಪೂರ್ವ ಶಕ್ತಿಯನ್ನು ನೀಡಿದ್ದಾರೆ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಮೋದಿ ಬರ್ಥ್ ಡೇಗೆ ಶುಭ ಹಾರೈಸಿದ್ದಾರೆ.

Edited By : Nirmala Aralikatti
PublicNext

PublicNext

17/09/2022 03:11 pm

Cinque Terre

57.1 K

Cinque Terre

6

ಸಂಬಂಧಿತ ಸುದ್ದಿ