ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಪಂಪ್ ಸೆಟ್ ಗೆ ಮೀಟರ್ ಹಾಕೋದಿಲ್ಲ: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಕೃಷಿ ಚಟುವಟಿಕೆಗಳಿಗೆ ಬಳಸಲಾಗುವ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಕೆ ಬಗ್ಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸದ್ಯ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ಉದ್ದೇಶ ಇಲ್ಲ ಎಂದಿದ್ದಾರೆ.

ನಗರದಲ್ಲಿ ಶುಕ್ರವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಪ್‌ಸೆಟ್ ಬಳಕೆಗೆ ಮೀಟರ್ ಅಳವಡಿಸುವ ಕುರಿತಾದ ಊಹಾಪೋಹಗಳನ್ನು ರೈತರು ನಂಬಬಾರದು. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ಸಂಬಂಧ, ಈಗಾಗಲೇ ಅಧಿಕಾರಿಗಳ ಸಭೆ ಕರೆದು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ. ಇಂಧನ ಇಲಾಖೆ ಆಳ ಮತ್ತು ಅಗಲಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

Edited By : Nagaraj Tulugeri
PublicNext

PublicNext

14/08/2021 12:42 pm

Cinque Terre

39.78 K

Cinque Terre

7