ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

10 ಸಾವಿರ ಕೃಷಿ ಉತ್ಪಾದಕರ ಸಂಘಗಳ ಸ್ಥಾಪನೆ: ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯದಲ್ಲಿ 10 ಸಾವಿರ ಕೃಷಿ ಉತ್ಪಾದಕರ ಸಂಘಗಳ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ 10 ಸಾವಿರ ಎಫ್‌ಪಿಒಗಳನ್ನು ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿ 700 ಎಫ್‌ಪಿಒ ತೆರೆಯಲು ನಿರ್ಧರಿಸಲಾಗಿದೆ. ಎಫ್‌ಪಿಒಗಳಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ರಫ್ತು ಗುಣಮಟ್ಟದ ಉತ್ಪಾದನೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಕ್ಲಸ್ಟರ್ ತೆರೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಇದರಿಂದ ಎಥೆನಾಲ್ ಮಾಡಲು ಆದ್ಯತೆ ನೀಡಲಾಗುವುದು. ಗೋಧಿ, ಅಕ್ಕಿಯಿಂದಲೂ ಎಥೆನಾಲ್ ಮಾಡಲು ಬರುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದಕ್ಕೆ ಪ್ರೋತ್ಸಾಹ ನೀಡಲಾಗುವುದು ಎಂದರು.

Edited By : Nagaraj Tulugeri
PublicNext

PublicNext

27/08/2021 04:24 pm

Cinque Terre

48.76 K

Cinque Terre

0

ಸಂಬಂಧಿತ ಸುದ್ದಿ