ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸಾಗುವಳಿ ಹಕ್ಕು ಪತ್ರ ನೀಡುವಂತೆ ಡಿಸಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ

ಬೆಳಗಾವಿ: ಸಾಗುವಳಿ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

ಗುರುವಾರ ಕಿತ್ತೂರು ತಾಲುಕಿನಿಂದ ಟ್ರ್ಯಾಕ್ಟರಗಳ ಮೂಲಕ ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ ರೈತರು ಪ್ರತಿಭಟನೆ ನಡೆಸಿದರು. ಕಿತ್ತೂರಿನಲ್ಲಿರುವ ರಾಣಿ ಚನ್ನಮ್ಮಾಜಿ ವೃತ್ತದ ಮುಂಭಾಗದಲ್ಲಿ ಕೆಲಕಾಲ ಧರಣಿ ನಡೆಸಿದ ರೈತರು ಹಾಗೂ ರೈತ ಮುಖಂಡರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 9 ಊರುಗಳ ರೈತರಿಂದ ಜಾನುವಾರು ಸಮೇತ ಡಿಸಿ ಕಚೇರಿ ಮುಂದೆ ಜಾಮಿಯಿಸಿದ ನೂರಾರು ರೈತರು, ಮೊದಲಿಗೆ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಆಗಮಿಸುವಂತೆ ಬಿಗಿ ಪಟ್ಟು ಹಿಡಿದರು. ಬಳಿಕ ರೈತರಿದ್ದ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

Edited By :
PublicNext

PublicNext

08/09/2022 10:33 pm

Cinque Terre

61.47 K

Cinque Terre

0

ಸಂಬಂಧಿತ ಸುದ್ದಿ