ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲುಷಿತ ನೀರು ಸೇವಿಸಿ 6 ಜನ ಸಾವು: ತನಿಖೆಗೆ ಐಎಎಸ್ ಅಧಿಕಾರಿ ನೇಮಕ

ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖಾಧಿಕಾರಿಯಾಗಿ ಮನೀಶ್‌ ಮೌದ್ಗಿಲ್‌ ನೇಮಕ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ, ಹಿರಿಯ ಐಎಎಸ್‌ ಅಧಿಕಾರಿ ಮನೀಶ್‌ ಮೌದ್ಗಿಲ್‌ ಅವ್ರಿಗೆ ತನಿಖೆಯ ಹೊಣೆ ನೀಡಿದ್ದು, ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ 5 ದಿನದೊಳಗಾಗಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇನ್ನು ಮೃತರ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಇನ್ನು ಮಧ್ಯಾಹ್ನವಷ್ಟೇ ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಲುಷಿತ ನೀರು ಕುಡಿದು ಸಾವನ್ನಪ್ಪಿರುವುದು ಗಂಭೀರ ವಿಚಾರವಾಗಿದೆ. ಹಾಗಾಗಿ ಈ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣದ ಬಗ್ಗೆ ಹಿರಿಯ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸೂಚಿಸಿದ್ದೇನೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

05/10/2021 10:24 pm

Cinque Terre

86.93 K

Cinque Terre

0

ಸಂಬಂಧಿತ ಸುದ್ದಿ