ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಣಪತಿ ಮೂರ್ತಿ 2-4 ಅಡಿ ಮಾತ್ರ ಇರಬೇಕು ಸರ್ಕಾರದ ಆದೇಶ : ಡಿಕೆಶಿ ಕಿಡಿ

ಬೆಂಗಳೂರು : ಗಣೇಶನ ಹಬ್ಬಕ್ಕೆ ದಿನಗಣನೆ ಆರಂಭವಾದ ಬೆನ್ನಲ್ಲೆ ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಸರ್ಕಾರದ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಪ್ರಶ್ನಿಸಿದ್ದಾರೆ. ಸರ್ಕಾರ ಈ ರೀತಿ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ 2 ತಿಂಗಳಿಂದ ಗಣೇಶ ಮೂರ್ತಿ ತಯಾರಕರು ಲಕ್ಷಾಂತರ ಮೂರ್ತಿಗಳನ್ನು ಮಾಡಿದ್ದಾರೆ. ಸರ್ಕಾರ ಕೊನೆ ಕ್ಷಣದಲ್ಲಿ ಇಂತಹ ನಿರ್ಬಂಧ ಹೇರಿದರೆ ಅವರ ಸ್ಥಿತಿ ಏನಾಗಬೇಕು? ಸರ್ಕಾರ ಇದನ್ನೇ ಎರಡು-ಮೂರು ತಿಂಗಳ ಹಿಂದೆಯೇ ಹೇಳಿದ್ದರೆ ಮೂರ್ತಿ ತಯಾರಕರು ದೊಡ್ಡ ಮೂರ್ತಿಗಳನ್ನು ಮಾಡುತ್ತಲೇ ಇರಲಿಲ್ಲ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಆದಾಯವಿಲ್ಲದಿದ್ದ ಗಣೇಶ ಮೂರ್ತಿ ತಯಾರಕರು, ತಮ್ಮ ಬಳಿ ಇದ್ದಬದ್ದ ಹಣ ಹಾಕಿ ಮೂರ್ತಿಗಳನ್ನು ತಯಾರಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಈ ನಿರ್ಬಂಧ ಹೇರಿದರೆ ಅವರು ಎಲ್ಲಿಗೆ ಹೋಗಬೇಕು? ಸರ್ಕಾರ ಇದುವರೆಗೂ ಇವರಿಗೆ ನಯಾ ಪೈಸೆ ಕೋವಿಡ್ ಪರಿಹಾರ ಕೊಟ್ಟಿಲ್ಲ. ಹೀಗಿರುವಾಗ ಈ ರೀತಿ ನಿರ್ಬಂಧ ಎಷ್ಟು ಸರಿ? ದೇವರ ಮೂರ್ತಿ ಮಾಡಿಕೊಂಡು ಜೀವನ ನಡೆಸುವವರ ಬದುಕಿಗೆ ಸರಕಾರ ಕೊಳ್ಳಿ ಇಟ್ಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಲ್ಲಿ ರಾಜ್ಯ ಸರ್ಕಾರ ಗಣಪತಿ ಉತ್ಸವಕ್ಕೆ ಕಡಿವಾಣ ಹಾಕುವ ಭರದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಕಂದಕ ನಿರ್ಮಿಸಿರುವುದು ದುರಾದೃಷ್ಟಕರ ಸಂಗತಿ.

Edited By : Nirmala Aralikatti
PublicNext

PublicNext

08/09/2021 04:50 pm

Cinque Terre

54.51 K

Cinque Terre

16

ಸಂಬಂಧಿತ ಸುದ್ದಿ