ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು ವಿತರಿಸಲು ಸರ್ಕಾರದ ಚಿಂತನೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆಯ ಬದಲಿಗೆ ಬಾಳೆಹಣ್ಣು ನೀಡುವುದರ ಜೊತೆಗೆ ಶೇಂಗಾಚಿಕ್ಕಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.

ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಲಿಂಗಾಯತ ಮಠಾಧೀಶರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶ ಒಳಗೊಂಡಿರುವ ಕಾರಣಕ್ಕೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಮೊಟ್ಟೆ ವಿತರಣೆ ನಿಲ್ಲಿಸುವುದಿಲ್ಲ, ಆರೋಗ್ಯ ತಜ್ಞರು ಸಲಹೆ ಮೇರೆಗೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಮೊಟ್ಟೆ ಸೇವಿಸಿದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಹಾಗೂ ಶೇಂಗಾಚಿಕ್ಕಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಮೊಟ್ಟೆ ತಿನ್ನಲು ನಿರಾಕರಿಸಿದ ಮಕ್ಕಳಿಗೆ ಬಾಳೆಹಣ್ಣಿನ ಜೊತೆ ಶೇಂಗಾ ಚಿಕ್ಕಿ ನೀಡಬಹುದು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದರು. ಇದೀಗ ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು ಕೊಡುತ್ತೇವೆ ಎಂದು ಸಚಿವ ಹಾಲಪ್ಪ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

17/12/2021 08:45 pm

Cinque Terre

39.58 K

Cinque Terre

7

ಸಂಬಂಧಿತ ಸುದ್ದಿ