ಶ್ರವಸ್ತಿ: ಶಾಲಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಕರೆತರಲು ಉತ್ತರ ಪ್ರದೇಶ ಸರ್ಕಾರ ಸ್ಕೂಲ್ ಚಲೋ ಅಭಿಯಾನ ಹಮ್ಮಿಕೊಂಡಿದೆ. ಇಂದಿನಿಂದ ಅಭಿಯಾನ ಆರಂಭವಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶಾಲಾ ಮಕ್ಕಳಿಗೆ ಊಟ ಬಡಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಸರ್ಕಾರಿ ಶಾಲೆಯಲ್ಲಿ 100%ರಷ್ಟು ಹಾಜರಾತಿ ವೃದ್ಧಿಸಲು ಹಾಗೂ ಮಕ್ಕಳ ಶೈಕ್ಷಣಿಕ ಬಲವರ್ಧನೆಗಾಗಿ ಈ ಯೋಜನೆಯನ್ನು ರೂಪಿಸಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರು, ಶ್ರವಸ್ತಿ ಜಿಲ್ಲೆಯಿಂದ ಯೋಜನಗೆ ಚಾಲನೆ ನೀಡಿದ್ದಾರೆ.
PublicNext
04/04/2022 01:48 pm