ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನ್‌ಲೈನ್‌ ಮೂಲಕವೇ ಸಿಗಲಿದೆ ವಿದ್ಯಾರ್ಥಿಗಳ ಬಸ್ ಪಾಸ್

ಬೆಂಗಳೂರು: ರಾಜ್ಯದಾದ್ಯಂತ ಆನ್​ಲೈನ್​ ಮೂಲಕವೇ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ದೊರಕುವಂತೆ ಮಾಡಲಾಗುವುದು ಅಂತ ಸಾರಿಗೆ ಸಚಿವ ಶ್ರೀರಾಮುಲು ಅವರು ತಿಳಿಸಿದ್ದಾರೆ. ಇಂದು ವಿಧಾನಸೌಧದ ಕಛೇರಿಯಲ್ಲಿ‌ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚಿಸಿದ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿ / ಸಿಬ್ಬಂದಿಗಳ ಜುಲೈ-2021 ರ ಮಾಹೆಯ ವೇತನ ವೆಚ್ಚಕ್ಕಾಗಿ ಮೂಲ ವೇತನ ತುಟ್ಟಿ ಭತ್ಯೆಯ ಶೇ.25 ರಷ್ಟನ್ನು , 2021 -22ನೇ ಸಾಲಿನ ಆಯವ್ಯಯದ ಸಹಾಯಧನದಡಿ ಒದಗಿಸಿರುವ ಅನುದಾನದಡಿ ಈ ಕೆಳಕಂಡಂತೆ ಒಟ್ಟಾರೆ ರೂ. 60.82 ಕೋಟಿಗಳನ್ನು ಬಿಡುಗಡೆಗೊಳಿಸಲಾಗಿದೆ ಅಂತ ತಿಳಿಸಿದರು.

Edited By : Nagaraj Tulugeri
PublicNext

PublicNext

24/08/2021 05:14 pm

Cinque Terre

46.91 K

Cinque Terre

1

ಸಂಬಂಧಿತ ಸುದ್ದಿ