ಬೀದರ್ : ರಾಜ್ಯದ ಕೊಪ್ಪಳ, ಬಾಗಲಕೋಟೆ ಹಾಗೂ ಬೀದರ್ ಜಿಲ್ಲೆಯ ಔರಾದ್ ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೂರು ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ 4,800 ಕೋಟಿ ಯೋಜನಾ ವೆಚ್ಚದಲ್ಲಿ ಕರ್ನಾಟಕದಲ್ಲಿ ಮೂರು ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು. ಒಂದು ಮೆಗಾವ್ಯಾಟ್ ಯುನಿಟ್ ಉತ್ಪಾದನೆಗೆ ಆರಂಭಿಕ ಸರಾಸರಿ 3.75 ಕೋಟಿ ರೂ.ನಿಂದ 4 ಕೋಟಿ ರೂ. ವೆಚ್ಚವಾಗಲಿದೆ. ಪ್ರತಿಯೊಂದು ಸೋಲಾರ್ ಪಾರ್ಕ್ ನಲ್ಲಿ 1,200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
PublicNext
18/08/2021 12:50 pm