ಬೆಂಗಳೂರು: ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಇಂದು ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್‌ನಿಂದ ಶಿವಾಜಿನಗರ ನಿಲ್ದಾಣದವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ ಸಿಎಂ ನಂತರ ಮಾತನಾಡಿದರು. ಎರಡನೇ ಹಂತ 2024ಕ್ಕೇ ಮುಗಿಸಲು, ಯೋಜನೆ ರೂಪಿಸಿ, ಹೆಚ್ಚುವರಿ ಮಾನವಸಂಪನ್ಮೂಲ ಬಳಸಿಕೊಂಡು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಇನ್ನು 21 ಕಿ.ಮೀ. ಆಗಬೇಕಾಗಿದೆ. ಇದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆಮೇಲೆ ಮೂರನೇ ಹಂತ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
PublicNext
22/09/2021 10:39 pm