ಮುಂಬೈ: ಕೇಂದ್ರ ಸರ್ಕಾರಿ ಸ್ವಾಮ್ಯದಲ್ಲಿದ್ದ ಏರ್ ಇಂಡಿಯಾ ಸಂಸ್ಥೆಯನ್ನು ಬಿಡ್ ಗೆಲ್ಲುವ ಮೂಲಕ ಟಾಟಾ ಕಂಪನಿ ತನ್ನದಾಗಿಸಿಕೊಂಡಿದೆ. ಈ ನಡುವೆ ಏರ್ ಇಂಡಿಯಾ ನೌಕರರನ್ನು ಕನಿಷ್ಟ ಒಂದು ವರ್ಷ ಮುಂದುವರೆಸಬೇಕೆಂದು ಕೇಂದ್ರ ಷರತ್ತು ವಿಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ವಿಮಾನಯಾನ ಸಚಿವಾಲಯ ಕಾರ್ಯದರ್ಶಿ ರಾಜೀವ್ ಬನ್ಸಲ್, ಏರ್ ಇಂಡಿಯಾದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಲ್ಲಾ ನೌಕರರ ಹಿತಾಸಕ್ತಿಗಳನ್ನು ಪರಿಗಣಿಸಿ, ಬಿಡ್ಡಿಂಗ್‌ನಲ್ಲಿ ಗೆದ್ದಿರುವ ಟಾಟಾ ಏರ್ ಇಂಡಿಯಾ ಗ್ರೂಪ್ ನೌಕರರನ್ನು ಒಂದು ವರ್ಷ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ತೆಗೆದು ಹಾಕುವಂತಿಲ್ಲ. ಜೊತೆಗೆ ಒಂದು ವರ್ಷ ನಂತರ ಸಂಸ್ಥೆ ಸೇವೆಯಿಂದ ತೆಗೆದುಹಾಕುವ ನೌಕರರಿಗೆ ವಿಆರ್‍ಎಸ್ ಸೌಲಭ್ಯ ನೀಡಬೇಕೆಂದು ತಿಳಿಸಿದ್ದಾರೆ. ಈ ಹಿಂದೆ ಏರ್ ಇಂಡಿಯಾದಲ್ಲಿ ಒಟ್ಟು 8 ಸಾವಿರಕ್ಕೂ ಅಧಿಕ ಖಾಯಂ ಮತ್ತು 4 ಸಾವಿರಕ್ಕೂ ಹೆಚ್ಚು ಗುತ್ತಿಗೆ ಸಿಬ್ಬಂದಿಯನ್ನು ಒಳಗೊಂಡು ಒಟ್ಟು 12 ಸಾವಿರಕ್ಕೂ ಅಧಿಕ ಉದ್ಯೋಗಿಗಳಿದ್ದಾರೆ.
PublicNext
10/10/2021 07:24 am