ನವದೆಹಲಿ: ಭಾರತದ ಅತೀ ಉದ್ದದ ಎಕ್ಸ್‌ಪ್ರೆಸ್ ಮಾರ್ಗವಾಗಿರುವ ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಇಂದು ಮಧ್ಯಾಹ್ನ 1.30ಕ್ಕೆ ಪ್ರಧಾನಿ ನರೆಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಸುಲ್ತಾನ್‌ಪುರ ಜಿಲ್ಲೆಯ ಕರ್ವಾಲ್ ಖೇರಿಯಲ್ಲಿ ಪೂರ್ವಾಂಚಲ್ ಎಕ್ಸ್‌ಪ್ರೆಸ್ ವೇ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.
42 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 340 ಕಿಲೋ ಮೀಟರ್ ಹೆದ್ದಾರಿ ನಿರ್ಮಾಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈ ದಿನ ಉತ್ತರ ಪ್ರದೇಶ ಬೆಳವಣಿಗೆಗೆ ವಿಶೇಷ ದಿನವಾಗಿದ್ದು, ಯುಪಿಯ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಇದು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಈ ಪೂರ್ವಾಂಚಲ ಎಕ್ಸಪ್ರೆಸ್ ವೇ ಯೋಜನೆಯಿಂದ ನಿಂದ ಉತ್ತರ ಪ್ರದೇಶದ ಅನೇಕ ಜಿಲ್ಲೆಗಳ ಅಭಿವೃದ್ದಿಗೆ ವೇಗ ಸಿಗುವ ನಿರೀಕ್ಷೆ ಇದೆ. ಎಕ್ಸ್‌ಪ್ರೆಸ್ ವೇನಲ್ಲೇ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳನ್ನು ಲ್ಯಾಂಡಿಂಗ್ ಮತ್ತು ಟೇಕಾಫ್ ಮಾಡಲಾಗುತ್ತೆ.
PublicNext
16/11/2021 08:11 am