ಚಂಡೀಗಢ: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿದ್ದೇ ತಡ. ಜನಪರವಾದ ಅನೇಕ ಯೋಜನೆಗಳನ್ನು ಒಂದಾದ ಮೇಲೊಂದರಂತೆ ಜಾರಿ ಮಾಡುತ್ತಲೇ ಇದೆ. 'ಒಬ್ಬ ಶಾಸಕರಿಗೆ ಒಂದೇ ಬಾರಿ ಪಿಂಚಣಿ' ಯೋಜನೆ ಜಾರಿ ಬಳಿಕ ಸಿಎಂ ಭಗವಂತ್ ಮಾನ್ ಅವರು ನೇರವಾಗಿ ಜನರ ಮನೆ ಬಾಗಿಲಿಗೆ ಪಡಿತರ ವಿತರಿಸುವ ಯೋಜನೆಯನ್ನು ಘೋಷಿಸಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಭಗವಂತ್, ಪಡಿತರ ಫಲಾನುಭವಿಗಳು ಇನ್ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಹಾಗೂ ತಮ್ಮ ಇತರ ಕೆಲಸಗಳನ್ನು ಬಿಟ್ಟು ಪಡಿತರ ಧಾನ್ಯ ವಿತರಣೆ ಕೇಂದ್ರಕ್ಕೆ ಬರುವ ಅಗತ್ಯವಿಲ್ಲ ಎಂದಿದ್ದಾರೆ. ಈ ಯೋಜನೆಯಡಿ ಉತ್ತಮ ಗುಣಮಟ್ಟದ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುವುದು. “ನಮ್ಮ ಅಧಿಕಾರಿಗಳು ಫಲಾನುಭವಿಗಳಿಗೆ ಫೋನ್ ಕರೆ ಮಾಡುತ್ತಾರೆ ಮತ್ತು ಅವರ ಅನುಕೂಲ ಮತ್ತು ಲಭ್ಯತೆಗೆ ಅನುಗುಣವಾಗಿ ಪಡಿತರವನ್ನು ಅವರ ಮನೆಗಳಿಗೆ ತಲುಪಿಸಲಿದ್ದಾರೆ” ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದರು.
PublicNext
28/03/2022 07:25 pm