ಬಾದಾಮಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜಂಟಿಯಾಗಿ ಗುದ್ದಲಿಪೂಜೆ ನೆರವೇರಿಸಿದ ಘಟನೆಗೆ ಇಂದು ಬಾದಾಮಿ ಜನತೆ ಸಾಕ್ಷಿಯಾಗಿದ್ದಾರೆ.
ಇಂದು ಬಾದಾಮಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉಗಲವಾಟ ಗ್ರಾಮದಲ್ಲಿ ಕೆರೂರು ಏತ ನೀರಾವರಿ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾಗೆಯೇ ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಜೊತೆಯಾಗಿಯೇ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ಉಪಸ್ಥಿತರಿದ್ದರು.
PublicNext
22/04/2022 07:02 pm