ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಮರಳು ಗಣಿಗಾರಿಕೆ ದಂಧೆಕೋರರ ವಿರುದ್ಧ ಕಠಿಣ ಕ್ರಮ: ಸಚಿವ ಆಚಾರ್

ಕಲಬುರಗಿ: ಅಕ್ರಮ ಮರಳು ಗಣಿಗಾರಿಕೆ ನಡೆಸಿದರೆ, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಾ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳು ಗಣಿಗಾರಿಕೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಬಡವರಿಗೆ ಸೂರು ನಿರ್ಮಾಣ ಮಾಡಿಕೊಳ್ಳಲು ಕಡಿಮೆ ಬೆಲೆಯಲ್ಲಿ ಮರಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ 37 ಮರಳು ಬ್ಲಾಕ್‍ಗಳ ಪೈಕಿ 21 ಬ್ಲಾಕ್‍ಗಳನ್ನು ಹೊಸ ಮರಳು ನೀತಿ ಪ್ರಕಾರ ಹಟ್ಟಿ ಗೋಲ್ಡ್ ಮೈನ್ಸ್ ವತಿಯಿಂದ ನಡೆಯಲು ಕಾರ್ಯಾದೇಶ ನೀಡಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

28/04/2022 03:12 pm

Cinque Terre

41.12 K

Cinque Terre

1

ಸಂಬಂಧಿತ ಸುದ್ದಿ