ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ಚೆನ್ನೈ: ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದ ಅವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಮೇಕೆದಾಟು ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕದ ನಡೆವೆ ಮತ್ತೊಮ್ಮೆ ಕಿಚ್ಚು ಎದ್ದಿದೆ.

ಜೂನ್ 17ರಂದು ನಡೆಯಲಿರುವ ಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಚರ್ಚಿಸದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಬೇಕು ಎಂದು ಸ್ಟಾಲಿನ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಾರ್ಯ ಚಟುವಟಿಕೆಯ ವ್ಯಾಪ್ತಿಯು ಸುಪ್ರೀಂಕೋರ್ಟ್ ನಿರ್ದೆಶನಗಳನ್ನು ಪಾಲಿಸುವ ಮಿತಿಯನ್ನು ಮಾತ್ರ ಹೊಂದಿದೆ. ಬೇರೆ ವಿಷಯಗಳನ್ನು ಪ್ರಾಧಿಕಾರ ಪರಿಗಣಿಸುವಂತಿಲ್ಲ.

ಮೇಕೆದಾಟು ಸಂಬಂಧ ತಮಿಳುನಾಡಿನ ಹಲವು ಅರ್ಜಿಗಳು ವಿಚಾರಣೆ ಹಂತದಲ್ಲಿದೆ. ಹಾಗಾಗಿ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಈ ವಿಷಯದ ಬಗ್ಗೆ ಯಾವುದೇ ಚರ್ಚೆಮಾಡದಂತೆ ಪ್ರಾಧಿಕಾರಕ್ಕೆ ಸಲಹೆ ನೀಡುವಂತೆ ಜಲಶಕ್ತಿ ಸಚಿವಾಲಯಕ್ಕೆ ಸೂಚಿಸಿ ಎಂದು ಪತ್ರದಲ್ಲಿ ಸ್ಟಾಲಿನ್ ಮನವಿ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

14/06/2022 11:49 am

Cinque Terre

57.01 K

Cinque Terre

0

ಸಂಬಂಧಿತ ಸುದ್ದಿ