ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಡಿ: ಕೇಂದ್ರಕ್ಕೆ ಮತ್ತೊಮ್ಮೆ ಮನವಿ ಮಾಡಿದ ಸಿಎಂ ಸ್ಟಾಲಿನ್

ತಿರುಪತ್ತೂರು: ನಾವು ಮೇಕೆದಾಟು ಯೋಜನೆಯನ್ನು ನಿಶ್ಚಿತವಾಗಿ ಪೂರ್ಣಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ. ಈ ನಡುವೆ ಇದಕ್ಕೆ ತಮಿಳು ನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಡ್ಡಗಾಲಾಗಿದ್ದಾರೆ. ಈಗಾಗಲೇ ಅವರು ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರಕ್ಕೆ ತಾಂತ್ರಿಕ ಮತ್ತು ಪರಿಸರ ಅನುಮತಿ ನೀಡದಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಮಾಡಿದ್ದಾರೆ. ವೆಲ್ಲೂರಿನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಕಳೆದ ಎರಡು ವಾರಗಳಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಅಣೆಕಟ್ಟು ನಿರ್ಮಿಸುವ ಅವರ ಪ್ರಯತ್ನವನ್ನು ವಿಫಲಗೊಳಿಸಲು ನಾವು ಪ್ರತಿ ಪ್ರಯತ್ನವನ್ನೂ ಮಾಡುತ್ತೇವೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

30/06/2022 07:30 am

Cinque Terre

37.85 K

Cinque Terre

1

ಸಂಬಂಧಿತ ಸುದ್ದಿ