ವರದಿ: ಈರನಗೌಡ ಪಾಟೀಲ
ಹಾವೇರಿ: ಸೋನಿಯಾ ಗಾಂಧಿ ED ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ಹಾವೇರಿ ಜಿಲ್ಲೆಯಲ್ಲಿಯೂ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಮ್.ಎಮ್. ಹಿರೇಮಠ ನೇತೃತ್ವದಲ್ಲಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟಿಸಲಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಚಿತ್ರನಟಿ, ಹಾವೇರಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಜಯಮಾಲ ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು, ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದರು.
PublicNext
22/07/2022 06:03 pm