ಬೆಂಗಳೂರು: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಅವರು ನೀಡಿರುವ ಮಾಧ್ಯಮ ಪ್ರಕಟಣೆಯಲ್ಲಿ, ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮ ಅಳವಡಿಸಲಾಗಿದೆ ಎಂಬ ವಿವರಗಳನ್ನು ನೀಡಿದ್ದಾರೆ. ಈ ನಿಬಂಧನೆಗಳನ್ನು ಪಾಲಿಸುವುದರಿಂದ ರಸ್ತೆಗಳಲ್ಲಿ ಅತಿಕ್ರಮಣ ತಡೆಯಲು ಸಹಾಯಕವಾಗಿ, ವಾಹನ ಸಂಚಾರ ಸುಗಮವಾಗುವುದಲ್ಲದೇ, ಅಪಘಾತಗಳ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದಿದ್ದಾರೆ.
PublicNext
03/08/2022 03:41 pm