ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಉಂಟಾಗಿವೆ. ಬೆಂಗಳೂರಿನಲ್ಲಿ ಆಗಿರುವ ಮಳೆ ಅವಾಂತರಗಳು ದೇಶದೆಲ್ಲೆಡೆ ಸುದ್ದಿಯಾಗಿವೆ. ಉದ್ಯಮಿ ಮೋಹನ್‌ದಾಸ್ ಪೈ ಸೇರಿದಂತೆ ಅನೇಕರು ಪ್ರಧಾನಿಗೆ ಟ್ವೀಟ್ ಮಾಡಿ ಬೆಂಗಳೂರು ಅಭಿವೃದ್ಧಿ ಬಗ್ಗೆ ಹಾಗೂ ಮಳೆಯಿಂದ ಉಂಟಾಗುವ ಅವಾಂತರಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರು ಸಿಟಿ ರೌಂಡ್ಸ್ ಮಾಡಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.
ರಾಜಕಾಲುವೆ ಒತ್ತುವರಿ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಅಲ್ಲದೆ, ಎಂಜಿನಿಯರ್‌ಗಳು ತಮ್ಮ ಕಾರ್ಯಪ್ರವೃತಿಯನ್ನ ಬದಲಾವಣೆ ಮಾಡಿಕೊಳ್ಳಬೇಕು ಎಂದೂ ಸೂಚನೆ ನೀಡಿದ್ದಾರೆ. ಅಲ್ಲದೆ, ರಾಜಕಾಲುವೆಯನ್ನು ಒತ್ತುವರಿ ಯಾಕೆ ಮಾಡಿಲ್ಲ..?, ರಾಜಕಾಲುವೆ ಮೇಲೆ ರಸ್ತೆ ಮಾಡಿದ್ದಾರೆ, ಬಿಲ್ಡಿಂಗ್ ಕಟ್ಟಿದ್ದಾರೆ. ದುಡ್ಡಿನ ವ್ಯವಹಾರ ಮಾಡಿಕೊಂಡು ಸುಮ್ಮನೆ ಆಗಿದೀರಾ ಎಂದು ಸಿಎಂ ಗರಂ ಆಗಿದ್ದಾರೆ. ಅಲ್ಲದೆ, ರಾಜಕಾಲುವೆ ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಒತ್ತುವರಿ ತೆರವು ಕೂಡಲೇ ಮಾಡಲೇಬೇಕು. ನಮ್ಮ ಸರ್ಕಾರ ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳ ವಿರುದ್ಧ ಸಿಎಂ ಬೊಮ್ಮಾಯಿ ಗರಂ ಆಗಿದ್ದಾರೆ.
PublicNext
02/09/2022 07:10 pm