ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹೊಸದಾಗಿ 4244 ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ರಾಜ್ಯ ಸರ್ಕಾರ ನಿರ್ಧಾರ

ವಿಧಾನಸೌಧ: ಬಡವರು, ವಲಸೆ ಕಾರ್ಮಿಕರು, ಭೂಮಿರಹಿತ ವಾಸಿಸುವ ಸ್ಥಳಗಳಲ್ಲಿ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 268.98 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ 4244 ಅಂಗನವಾಡಿಗಳ ನಿರ್ಮಾಣ ಮಾಡಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಆಡಳಿತಾತ್ಮಕವಾಗಿ ಅನುಮೋದನೆ ದೊರಕಿದೆ. ಪ್ರಸ್ತುತ ರಾಜ್ಯದಲ್ಲಿ 66361 ಅಂಗನವಾಡಿಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ಮೂಲಕ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ, ಗರ್ಭಿಣಿ ಮಹಿಳೆಯರು ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರ, ಪೌಷ್ಠಿಕತೆ ಹಾಗೂ ಆರೋಗ್ಯ ಶಿಕ್ಷಣ ಸೇರಿದಂತೆ 6 ಸೇವೆ ಗಳನ್ನು ಒದಗಿಸಲಾಗುತ್ತಿದೆ.

ಮಕ್ಕಳ ಸಮಗ್ರ ಅಭಿವೃದ್ದಿ ಯೋಜನೆ ಅಡಿಯಲ್ಲಿ ಗ್ರಾಮೀಣ ಭಾಗಗಳಲ್ಲಿ 1,665 ನಗರ ಪ್ರದೇಶಗಳಲ್ಲಿ 2,589 ಅಂಗನವಾಡಿ ಕೇಂದ್ರಗಳು ಸ್ಥಾಪನೆಯಾಗಲಿವೆ. ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಠಿಕಾಂಶ ಆಹಾರ ಮತ್ತು ಶಾಲಾ ಪೂರ್ವ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಜೊತೆಗೆ ಸುಮಾರು 8100 ಮಹಿಳೆಯರಿಗೆ ಉದ್ಯೋಗ ಅವಕಾಶ ದೊರೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಮ್ಮ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Edited By : Abhishek Kamoji
PublicNext

PublicNext

04/09/2022 02:53 pm

Cinque Terre

30.66 K

Cinque Terre

0