ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಡ ಜನರು ತುರ್ತು ಚಿಕಿತ್ಸೆಗಾಗಿ ಪ್ರಾಣವನ್ನು ಕೈಯಲ್ಲಿ ಹಿಡಿದು ದೂರದ ಊರುಗಳಿಗೆ ಹೋಗಬೇಕಾದ ಸಂಕಷ್ಟಕರ ಸ್ಥಿತಿಯಿದೆ. ಹೀಗಾಗಿ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಬಡವರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಸುಸಜ್ಜಿತವಾದ ಮಲ್ಟಿ ಸ್ಟೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರೂ ಆದ ಡಾ.ವಿರೇಂದ್ರ ಹೆಗ್ಗಡೆ ಸಿಎಂ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಉತ್ತರಕನ್ನಡ ಜಿಲ್ಲೆಯ ಬಡ ಜನರು ತುರ್ತು ಚಿಕಿತ್ಸೆಯನ್ನು ಪಡೆಯಬೇಕಾದಂತಹ ಸಂದರ್ಭದಲ್ಲಿ ರೋಗಿಯ ಪ್ರಾಣವನ್ನು ಕೈಯ್ಯಲ್ಲಿ ಹಿಡಿದುಕೊಂಡು ದೂರದ ಊರುಗಳಿಗೆ ಹೊತ್ತೊಯ್ಯುವಂತಹ ಪರಿಸ್ಥಿತಿಗೆ ಪರಿಹಾರವಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿ,
ಇಲ್ಲಿಯ ಜನರಿಗೆ ತಮ್ಮ ಜಿಲ್ಲೆಯಲ್ಲಿಯೇ ಸಕಲ ವೈದ್ಯಕೀಯ ಸೌಲಭ್ಯಗಳೂ ಸಿಗುವಂತೆ ಅನುವು ಮಾಡಿಕೊಡುವಂತೆ ಹೆಗ್ಗಡೆಯವರು ತಮ್ಮ ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ. ಇದರಿಂದ ಈ ಭಾಗದ ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿ ಒಳ್ಳೆಯ ಸುಖೀ ಜೀವನ ನಡೆಸಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
PublicNext
06/09/2022 06:18 pm