ಮೈಸೂರು: ಬೆಂಗಳೂರಿನ 9 ವಲಯಗಳ ಪೈಕಿ 2 ವಲಯಗಳಲ್ಲಿ ಮಾತ್ರ ಮಳೆಯಿಂದ ಹೆಚ್ಚಿನ ತೊಂದರೆಯಾಗಿದೆ. ಆದರೆ ಇಡೀ ಬೆಂಗಳೂರಿಗೆ ತೊಂದರೆಯಾಗಿದೆ ಎಂದು ಬಿಂಬಿಸಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇನ್ನು ತೊಂದರೆಗೊಳಗಾಗಿರುವ ಎರಡು ವಲಯಗಳ ಪೈಕಿ ಒಂದು ವಲಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿವೆ.
ಎಲ್ಲ ಕೆರೆಗಳು ಕೋಡಿ ಬಿದ್ದಿರುವುದರಿಂದ ನಿರಂತರವಾಗಿ ನೀರು ಹರಿಯುತ್ತಿದೆ. ಅಲ್ಲದೇ ರಾಜಕಾಲವೆ, ಕೆರೆಗಳ ಒತ್ತುವರಿ ಕಾರಣದಿಂದಲೂ ಆ ಭಾಗದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.ಮುಂಬರುವ ದಿನಗಳಲ್ಲಿ ಒತ್ತುವರಿ ತೆರವುಗೊಳಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಹೇಳಿದ್ದಾರೆ.
PublicNext
06/09/2022 08:14 pm