ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖರ್ಗೆ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ, ಬಸವ ಜಯಂತ್ಯುತ್ಸವ ಸಮಿತಿ ಜಿಲ್ಲಾ ಉಪಾಧ್ಯಕ್ಷ, ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ನಗರಾಧ್ಯಕ್ಷ ಉದಯ ಪಾಟೀಲ್ ನೇತೃತ್ವದಲ್ಲಿ ನಗರದ ಸರದಾರ ಪಟೇಲ್ ವೃತ್ತದಲ್ಲಿ ಎಐಸಿಸಿಅಧ್ಯಕ್ಣ ಸ್ಥಾನದ ಅಭ್ಯರ್ಥಿ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಶುಭ ಕೋರಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಸ್. ಪಾಟೀಲ್ ನರಿಬೋಳ, ಡಾ. ಖರ್ಗೆ ಅವರು ಈ ನಾಡು ಕಂಡ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ. ಅವರು ಎಂದೋ ಮುಖ್ಯಮಂತ್ರಿಯಾಗಬೇಕಿತ್ತು. ಆದರೀಗ ಒಂದು ಪಕ್ಷದ ಉನ್ನತ ಹುದ್ದೆ ಅಲಂಕರಿಸುತ್ತಿರುವುದು ಈ ಭಾಗದ ಜನತೆಗೆ ಸಂತಸ ತಂದಿದೆ ಎಂದರು.

Edited By : Somashekar
PublicNext

PublicNext

04/10/2022 03:37 pm

Cinque Terre

50.19 K

Cinque Terre

1

ಸಂಬಂಧಿತ ಸುದ್ದಿ