ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಚಿತ ಪಡಿತರ ವಿತರಣೆ ಮುಂದಿನ 6 ತಿಂಗಳು ವಿಸ್ತರಣೆ: ನರೇಂದ್ರ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಮತ್ತೆ 6 ತಿಂಗಳು ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಈ ಯೋಜನೆ ಅಡಿಯಲ್ಲಿ ಸದ್ಯ ದೇಶಾದ್ಯಂತ 80ಕೋಟಿ ಜನ ಫಲಾನುಭವಿಯಾಗಿದ್ದಾರೆ. ಕೊರೊನಾ ಕಷ್ಟ ಕಾಲದಲ್ಲಿ 2020ರ ಮಾರ್ಚ್‌ನಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ‌. ದೇಶದ ಬಲಿಷ್ಠತೆ ಪ್ರತಿ ನಾಗರಿಕನ ಶಕ್ತಿಯ ಮೇಲೆ ಅವಲಂಬಿತವಾಗಿದೆ‌. ಹೀಗಾಗಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಇನ್ನೂ ಆರು ತಿಂಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

27/03/2022 11:10 am

Cinque Terre

47.89 K

Cinque Terre

15

ಸಂಬಂಧಿತ ಸುದ್ದಿ