ಸುರಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಬೇಕೆಂದು ವಾಲ್ಮೀಕಿ ಗುರುಪೀಠದ ಶ್ರೀಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಕುಳಿತು ಇಂದಿಗೆ ನೂರು ದಿನ ಆಯ್ತು. ಈ ನೂರು ದಿನವನ್ನು ಬೆಂಬಲಿಸಿ ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಇಂದು ಪ್ರತಿಭಟನೆ ಮಾಡಲಾಯಿತು.
ಪರಿಶಿಷ್ಟ ಜಾತಿಗೆ 15ರಿಂದ 17 ಪರ್ಸೆಂಟ್ ಹಾಗೂ ಪರಿಶಿಷ್ಟ ಪಂಗಡಕ್ಕೆ 3ರಿಂದ 7.5 ಮೀಸಲಾತಿ ಹೆಚ್ಚಿಸಬೇಕು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿ ನಗರದ ಮಹರ್ಷಿ ವಾಲ್ಮೀಕಿ ವೃತ್ತದಿಂದ ಪ್ರಮುಖ ಬೀದಿಗಳ ಮೂಲಕ ಗಾಂಧಿ ವೃತ್ತದ ವರೆಗೆ ಪ್ರತಿಭಟಿಸಲಾಯಿತು.
ಈ ವೇಳೆ ವಾಲ್ಮೀಕಿ ಸಮುದಾಯದ ನಾಯಕರು ಹಾಗೂ ದಲಿತ ಮುಖಂಡರು ಸೇರಿ ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
PublicNext
21/05/2022 11:03 am