ಬೆಳಗಾವಿ: ಕರ್ನಾಟಕದಲ್ಲಿ ಶೀಘ್ರದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ಇಂದು ನಡೆದ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡ ಕರ್ನಾಟಕದಲ್ಲಿ ಶೀಘ್ರದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಚಿಂತನೆ ಇದೆ. ಕರ್ನಾಟಕದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಕೊಡಗಿನಿಂದಲೂ ಪ್ರಸ್ತಾವನೆ ಬಂದಿದೆ. ಆದರೆ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನಿಯಮಗಳ ಅನ್ವಯ ಪರಿಶೀಲನೆ ನಡೆಸಿ ಸೂಕ್ತ ಜಾಗದಲ್ಲಿ ರಾಜ್ಯದ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಹೇಳಿದ್ದಾರೆ. ಕೊಡಗು ಜಿಲ್ಲೆಗೆ ವಿವಿಧ ಕ್ರೀಡಾ ಯೋಜನೆಗಳಿಗೆ ಪ್ರಸಕ್ತ ಸಾಲಿನಲ್ಲಿ ಇಲಾಖೆಯಿಂದ 2.18 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದರು.
PublicNext
17/12/2021 10:26 pm