ಹುಬ್ಬಳ್ಳಿ: ನಗರದ ಹೃದಯ ಭಾಗವಾದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣ ಕಾಮಗಾರಿಗೆ ಶುಕ್ರವಾರ (ಜ.15)ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
‘298 ಕೋಟಿ ರೂ. ಮೊತ್ತದ ಕಾಮಗಾರಿ ಇದಾಗಿದ್ದು, ಟ್ರಾಫಿಕ್ ನಿಯಂತ್ರಣಕ್ಕೆ ಸಹಾಯಕವಾಗಲಿದೆ. ಅದೇ ದಿನ ಕಲಘಟಗಿ ತಾಲ್ಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಭೂಮಿಪೂಜೆ ನೆರವೇರಿಸಲಿದ್ದಾರೆ.
PublicNext
14/01/2021 11:01 pm