ಬೆಂಗಳೂರು: ಹಿಂದೆ ನಾನು ಆರೋಗ್ಯ ಸಚಿವನಾಗಿದ್ದ ವೇಳೆ ದೆಹಲಿಗೆ ಹೋದಾಗ ಅಲ್ಲಿನ ಮೊಹಲ್ಲಾ ಕ್ಲಿನಿಕ್, ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಆಶ್ಚರ್ಯಗೊಂಡೆ, ಅರವಿಂದ್ ಕೇಜ್ರಿವಾಲ್ ಅವರು ಅಭಿವೃದ್ಧಿ ವಿಚಾರದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ನೋಡಿ ಅವರ ದೊಡ್ಡ ಅಭಿಮಾನಿಯಾದೆ ಎಂದು ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಶಾಂತಿನಗರದ ಬಸಪ್ಪ ರಸ್ತೆಯಲ್ಲಿ ಇರುವ ಆಮ್ ಆದ್ಮಿ ಕ್ಲಿನಿಕ್ ಭೇಟಿ ಕೊಟ್ಟಿದ್ದ ಮಾಜಿ ಸಚಿವ ರಮೇಶ್ ಕುಮಾರ್, ಅಲ್ಲಿನ ಕಾರ್ಯವೈಖರಿ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು.
ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಜನತೆ ಒಂದೇ ಒಂದು ಸಲ ಅವಕಾಶ ಕೊಟ್ಟರು. ಈ ಅವಕಾಶವನ್ನು ಅವರು, ಜನಪರ ಸೇವೆ ಮಾಡುವುದಕ್ಕೆ ಬಳಸಿಕೊಂಡು ಜನಮನ ಗೆದ್ದಿದ್ದಾರೆ. ಕೇಜ್ರಿವಾಲ್ ಅವರು ಬದಲಾವಣೆ ತಂದಿರುವ ಆರೋಗ್ಯ, ಶಿಕ್ಷಣ, ಉಚಿತ ನೀರು, ವಿದ್ಯುತ್, ಅಗತ್ಯ ಮೂಲ ಸೌಕರ್ಯದಂತಹ ಮಾದರಿ ಕೆಲಸಗಳು ಎಲ್ಲಾ ರಾಜ್ಯಗಳಲ್ಲೂ ಆಗಬೇಕು ಎಂದು ರಮೇಶ್ ಕುಮಾರ್ ಇಂಗಿತ ವ್ಯಕ್ತಪಡಿಸಿದರು.
PublicNext
25/01/2021 04:41 pm