ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೇಕೆದಾಟುಗೆ ಯಾವುದೇ ರಾಜ್ಯದ ಪರ್ಮಿಶನ್ ಬೇಕಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆ ಪೂರ್ಣಗೊಳಿಸಲು ಯಾವುದೇ ರಾಜ್ಯಗಳ ಅನುಮತಿ ಬೇಕಾಗಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮೇಕೆದಾಟು ಯೋಜನೆ ಅನುಷ್ಟಾನಕ್ಕೆ ಕಾವೇರಿ ಹರಿಯುವ ರಾಜ್ಯಗಳ ಅನುಮತಿ ಬೇಕು ಎಂದು ಕೇಂದ್ರ ಸರ್ಕಾರ ಲೋಕಸಬೆಯಲ್ಲಿ ಅಭಿಪ್ರಾಯ ಮಂಡಿಸಿತ್ತು. ಈ ಹೇಳಿಕೆ ಬಗ್ಗೆ ಸಿಎಂ ಬೊಮ್ಮಾಯಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಕುಡಿಯುವ ನೀರಿನ ಯೋಜನೆಗಳನ್ನು ಸ್ಥಾಪಿಸುವಾಗ ಯಾವುದೇ ರಾಜ್ಯಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಆಂಧ್ರಪ್ರದೇಶದ ಯೋಜನೆಗಳಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಕುಡಿಯುವ ನೀರಿನ ಯೋಜನೆಗಳಿಗೆ ಅಂತಹ ಅನುಮತಿ ಅಗತ್ಯವಿಲ್ಲ.

ನಾನು ಅದನ್ನು ಈಗಾಗಲೇ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಗಮನಕ್ಕೆ ತಂದಿದ್ದೇನೆ ಎಂದು ಕಳೆದ ವಾರ ಲೋಕಸಭೆಯಲ್ಲಿ ಕೇಂದ್ರ ಸಚಿವರು ನೀಡಿದ್ದ ಹೇಳಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಮೇಕೆದಾಟು ಯೋಜನೆ ಕುರಿತು ಹಾಸನದ ಜನತಾದಳ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಶೇಖಾವತ್, ಈ ಯೋಜನೆಗೆ ಇತರ ನದಿ ತೀರದ ರಾಜ್ಯಗಳ ಒಪ್ಪಿಗೆ ಅಗತ್ಯವಿದೆ ಎಂದು ಲೋಕಸಭೆಗೆ ತಿಳಿಸಿದ್ದರು.

Edited By : Nagaraj Tulugeri
PublicNext

PublicNext

12/08/2021 03:47 pm

Cinque Terre

99.02 K

Cinque Terre

6

ಸಂಬಂಧಿತ ಸುದ್ದಿ