ನವದೆಹಲಿ: ಮೇಕೆದಾಟು ನೀರಾವರಿ ವಿಚಾರವಾಗಿ ತಮಿಳುನಾಡು ಸರ್ಕಾರ ಪದೇ ಪದೇ ಕರ್ನಾಟಕದ ವಿರುದ್ಧ ಕ್ಯಾತೆ ತೆಗೆಯುತ್ತಲೇ ಬಂದಿದೆ. ಈಗ ಮತ್ತೊಮ್ಮೆ ಅದೇ ಕೆಲಸ ಮಾಡಿದೆ. ಮೇಕೆದಾಟು ಬಗ್ಗೆ ಸಲ್ಲಿಸಲಾದ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಿರಸ್ಕರಿಸಲು ಸುಪ್ರೀಂಕೋರ್ಟ್‍ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ.
ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ಕರ್ನಾಟಕ ಇದೀಗ ಯೋಜನೆಯನ್ನು ನಾವು ಆರಂಭಿಸುತ್ತೇವೆ ಎಂದು ಪಟ್ಟುಹಿಡಿದಿದೆ. ಈಗಾಗಲೇ ಮೇಕೆದಾಟು ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಆಗಿದ್ದು, ಶೀಘ್ರದಲ್ಲೇ ಕೇಂದ್ರದ ಜೊತೆ ಅನುಮತಿ ಪಡೆದು ಯೋಜನೆ ಆರಂಭಿಸುತ್ತೇವೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇವೆಲ್ಲದರ ನಡುವೆ ತಮಿಳುನಾಡು ಸರ್ಕಾರ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯಲ್ಲಿ ಡಿಪಿಆರ್ ತಿರಸ್ಕರಿಸಲು ಸೂಚಿಸುವಂತೆ ಮನವಿ ಮಾಡಿಕೊಂಡಿದೆ.
PublicNext
27/08/2021 04:54 pm