ಬೆಂಗಳೂರು,ಆ.28- ಮಲೆನಾಡು ಜನತೆಯ ಬಹುದಿನಗಳ ಬೇಡಿಕೆಯಾದ ಸಾಂಬಾರ್(ಸ್ಪೈಸ್) ಪಾರ್ಕ್ ಸದ್ಯದ್ಲಲೇ ತಲೆಎತ್ತಲಿದ್ದು,ದಶಕಗಳ ಕನಸು ಕೊನೆಗೂ ನನಸಾಗುವ ದಿನ ಸಮೀಪಿಸಿದೆ.
ಶುಕ್ರವಾರ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಉದ್ಯೋಗ ಮಿತ್ರದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹಾಗೂ ಕೇಂದ್ರ ಕೃಷಿ ಮತ್ತು ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ನಡೆಸಿದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಹೊಸಕೋಟೆ ಸಮೀಪದ ಅಂಬಾಲಿ ಗ್ರಾಮದಲ್ಲಿ ಸುಮಾರು 10 ಎಕರೆ ಜಮೀನಿನಲ್ಲಿ ಸಾಂಬಾರು ಪಾರ್ಕ್ ನಿರ್ಮಿಸಲು ಸಭೆ ಒಮ್ಮತದ ತೀರ್ಮಾನವನ್ನು ಕೈಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರವೇಶಾಭಿವೃದ್ಧಿ ನಿಗಮ(ಕೆಐಎಡಿಬಿ)ವು ರೂ. 20,35,665 ಆರ್ಥಿಕ ನೆರವು ನೀಡಲಿದ್ದು, 10 ಎಕರೆ ಜಮೀನನಿನಲ್ಲಿ ಪಾರ್ಕ್ ನಿರ್ಮಾಣವಾಗಲಿದೆ.
PublicNext
27/08/2021 10:20 pm