ಬೆಂಗಳೂರು: ಕೊರೊನಾ ನಿರೋಧಕ ಲಸಿಕೆ ಪಡೆಯದವರಿಗೆ ರೇಶನ್ ಸಿಗೋದಿಲ್ಲ ಎಂಬ ಆದೇಶ ಹೊರಡಿಸಿದ್ದ ಚಾಮರಾಜನಗರದ ಜಿಲ್ಲಾಧಿಕಾರಿ ಆದೇಶ ಸರಿಯಾದ ಕ್ರಮವಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಮಾತನಾಡಿದ ಬೊಮ್ಮಾಯಿ, ಇಂತಹ ಆದೇಶ ಕೊಡುವ ಬದಲಾಗಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿ, ಜನರ ಮನವೊಲಿಸಿ, ಲಸಿಕೆ ಹಾಕಿಸಿಕೊಳ್ಳುವಂತೆ ಮಾಡಬೇಕು ಎಂದಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದರು ಎಂದು ಹೇಳಲಾಗುತ್ತಿದೆ. ಈ ಆದೇಶ ಹಲವು ಟೀಕೆಗಳಿಗೆ ಎಡೆಮಾಡಿಕೊಟ್ಟಿದೆ.
PublicNext
02/09/2021 12:40 pm