ಹುಬ್ಬಳ್ಳಿ: ಸೆಪ್ಟೆಂಬರ್ 5 ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಸಾಮಾನ್ಯ ಜನತೆಯ ಮೇಲೆ ಹೊರೆ ಆಗಿರುವ ಸಿಲಿಂಡರ್ ಹಾಗೂ ತೈಲ ಬೆಲೆ ಏರಿಕೆ ವಿಚಾರವಾಗಿ ಅವರೊಂದಿಗೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಸಿಲಿಂಡರ್, ತೈಲ ಬೆಲೆ ಏರಿಕೆ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊರೆ ಚರ್ಚಿಸುತ್ತೇನೆ ಎಂದು ಅವರು ತಿಳಿಸಿದರು.
ಕೇರಳ ಗಡಿಯಿಂದ ರಾಜ್ಯಕ್ಕೆ ಕೊರೊನಾ ನಕಲಿ ನಗೆಟಿವ್ ವರದಿಯನ್ನು ಪಡೆದು ಜನರು ಆಗಮಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಗಡಿಯಲ್ಲಿ ಎಲ್ಲವನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ಸುಳ್ಳು ವರದಿ ನೀಡಿ, ನುಸುಳುವವರ ಮೇಲೆ ಕ್ರಮಕ್ಕೆ ಮುಂದಾಗುತ್ತೇವೆ ಎಂದರು.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆ ಆರಂಭ ವಿಚಾರ ಕುರಿತು ತಿಳಸಿದ ಅವರು ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ದಾವಣಗೆರೆಯಲ್ಲಿ ಪೊಲೀಸ್ ಸ್ಕೂಲ್ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.
PublicNext
02/09/2021 12:45 pm