ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಸತಿ ರಹಿತ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲು ಸಿಎಂ ಸೂಚನೆ

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ 750 ಗ್ರಾಮಪಂಚಾಯಿತಿಗಳಲ್ಲಿ ವಸತಿ ರಹಿತ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ರಾಜ್ಯದ 750 ಗ್ರಾಮಪಂಚಾಯಿತಿಗಳಲ್ಲಿ ಸಾಮಾಜಿಕ, ಆರ್ಥಿಕ, ಹಿಂದುಳಿದ ವರ್ಗದ ವಸತಿ ರಹಿತರಿಗೆ ಘೋಷಿಸಿದ್ದ 4 ಲಕ್ಷ ಮನೆಗಳ ನಿರ್ಮಾಣ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ನಗರ, ಗ್ರಾಮೀಣ ಪ್ರದೇಶದ ಸಾಮಾಜಿಕ, ಆರ್ಥಿಕ, ಹಿಂದುಳಿದ ವರ್ಗದವರಿಗೆ 4 ಲಕ್ಷ ಮನೆಗಳನ್ನು ವಿತರಣೆ ಮಾಡುವುದುಆಗಿ ಸಿಎಂ ಬೊಮ್ಮಾಯಿ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಯೋಜನೆ ಘೋಷಿಸಿದ್ದರು. ಈ ಯೋಜನೆಯ ಭಾಗವಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Edited By : Nagaraj Tulugeri
PublicNext

PublicNext

10/09/2021 06:42 pm

Cinque Terre

125.59 K

Cinque Terre

10

ಸಂಬಂಧಿತ ಸುದ್ದಿ